HDFC Scholarship 2025- 1 ರಿಂದ 12ನೇ ತರಗತಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ 75000 ಸ್ಕಾಲರ್ಶಿಪ್ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ 1 ರಿಂದ 6ನೇ ತರಗತಿ ಹಾಗೂ 7 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ & ಪದವಿ, ITI, ಡಿಪ್ಲೋಮಾ , ಸ್ನಾತಕೋತ್ತರ ಪದವಿ, & ಇತರ ವಿದ್ಯಾರ್ಹತೆ ಹೊಂದಿದವರಿಗೆ ಸುಮಾರು 75 ಸಾವಿರ ವರೆಗೆ ಸ್ಕಾಲರ್ಶಿಪ್ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನೀಡಲಾಗುತ್ತದೆ
ಹಾಗಾಗಿ ನಾವು ಈ ಲೇಖನ ಮೂಲಕ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಸ್ಕಾಲರ್ಶಿಪ್ ಯೋಜನೆ ಯಾವುದು ಹಾಗೂ ಈ ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಎಚ್ ಡಿ ಎಫ್ ಸಿ ಬ್ಯಾಂಕ್ ಸ್ಕಾಲರ್ಶಿಪ್ (HDFC Scholarship 2025).?
ಎಚ್ ಡಿ ಎಫ್ ಸಿ ಬ್ಯಾಂಕ್ ಬಡ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭ ಮಾಡಿದೆ.! ಈ ಸ್ಕಾಲರ್ಶಿಪ್ ಯೋಜನೆ ಅಮೂಲಕ ವಿದ್ಯಾರ್ಥಿಗಳಿಗೆ 75,000 ವರೆಗೆ ವಿದ್ಯಾರ್ಹತೆ ಅನುಗುಣವಾಗಿ ಸ್ಕಾಲರ್ಶಿಪ್ ನೀಡಲಾಗುತ್ತಿದೆ

ಹೆಚ್‍ಡಿಎಫ್‍ಸಿ ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ಹೆಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭ ಮಾಡಿದೆ ಹಾಗಾಗಿ ಆಸಕ್ತಿ ಇರುವಂತ ವಿದ್ಯಾರ್ಥಿಗಳು ಹಾಗೂ ಅರ್ಹ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿ ಆರ್ಥಿಕ ನೆರವು ಪಡೆದುಕೊಳ್ಳಿ
ಎಚ್‍ಡಿಎಫ್‍ಸಿ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು..?
ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ಜಾರಿಗೆ ತಂದಿರುವ ಎಚ್ ಡಿ ಎಫ್ ಸಿ ಪರಿವರ್ತನ ಸ್ಕಾಲರ್ಶಿಪ್ ಯೋಜನೆಯ ಮೂಲಕ ಅರ್ಹ ವಿದ್ಯಾರ್ಥಿಗಳು ಅಂದರೆ ಈ ಕೆಳಗಡೆ ನೀಡಿದ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಆರ್ಥಿಕ ನೆರವು ಪಡೆಯಬಹುದು
1ನೇ ರಿಂದ 6 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಿದ ವಿದ್ಯಾರ್ಥಿಗಳಿಗೆ ₹15,000/- ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಹೊಂದಿರುತ್ತಾರೆ
ಏಳನೇ ರಿಂದ 12ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಿ ₹18,000/- ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಹೊಂದಿರುತ್ತಾರೆ
ಪದವಿ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ₹50,000/- ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಹೊಂದಿರುತ್ತಾರೆ
ಸ್ನಾತಕೋತ್ತರ ಪದವಿ (PG) ಮತ್ತು ವೃತ್ತಿಪರ ಕೋರ್ಸ್ (course) ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ₹75,000/- ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಹೊಂದಿರುತ್ತಾರೆ
ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
- ವಿದ್ಯಾರ್ಥಿಗಳು ಭಾರತದ ನಿವಾಸಿಗಳಾಗಿರಬೇಕು
- ವಿದ್ಯಾರ್ಥಿಗಳು ಪ್ರಸ್ತುತ ವರ್ಷದ ಸಾಲಿನಲ್ಲಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ₹2,30,000/- ಕಡಿಮೆ ಇರಬೇಕು
- ಹೆಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಗೆ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ..! ಆದ್ದರಿಂದ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ
ಹೆಚ್‍ಡಿಎಫ್‍ಸಿ ಸ್ಕಾಲರ್ಶಿಪ್ ಯೋಜನೆಗೆ ಹೇಗೆ ಅರ್ಜಿ ಸಲ್ಲಿಕೆ ಮಾಡಬೇಕು..?
ವಿದ್ಯಾರ್ಥಿಗಳು ಮೊದಲು ಹೆಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಯೋಜನೆ ಕುರಿತು ಹೆಚ್ಚಿನ ವಿವರ ಪಡೆದುಕೊಳ್ಳಿ ನಂತರ ನಾವು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅಲ್ಲಿ ಕೇಳಿದ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31/08/2025
ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಉಪಯುಕ್ತ ಮಾಹಿತಿಗಳು ಮತ್ತು ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು