SSP Scholarship 2025: SSP ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ಈ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ!
ನಮಸ್ಕಾರ ಗೆಳೆಯರೇ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಎಸ್ ಎಸ್ ಪಿ ಆನ್ಲೈನ್ ಪೋರ್ಟಲ್ ಮೂಲಕ 2024 ಮತ್ತು 25 ನೇ ಸಾಲಿನ ಮೆಟ್ರಿಕ್ ನಂತರ ಅಂದರೆ ಹತ್ತನೇ ತರಗತಿ ನಂತರ ಬರುವಂತ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಅರ್ಜಿ ಆಹ್ವಾನ ಮಾಡಲಾಗಿದೆ.
ನಾವು ಈ ಲೇಖನಿಯ ಮೂಲಕ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಇದೆ ಮತ್ತು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನವನ್ನು ನಿಮ್ಮ ಸ್ನೇಹಿತರು ಹಾಗೂ ವಿದ್ಯಾರ್ಥಿಗಳಿಗೆ ಶೇರ್ ಮಾಡಿ
SSP ಸ್ಕಾಲರ್ಶಿಪ್ ಯೋಜನೆ 2025 (SSP Scholarship 2025)..?
ನಮ್ಮ ಕರ್ನಾಟಕದಲ್ಲಿ ವಾಸ ಮಾಡುವಂತಹ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ವಿದ್ಯಾಭ್ಯಾಸ ಮಾಡಲು ಬಯಸುವಂಥ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ವಿವಿಧ ಅಭಿವೃದ್ಧಿ ನಿಗಮ ಹಾಗೂ ಇಲಾಖೆಯ ಮೂಲಕ ವಿದ್ಯಾರ್ಥಿಗಳಿಗೆ ಎಸ್ ಎಸ್ ಪಿ ಸ್ಕಾಲರ್ಶಿಪ್ ನೀಡುತ್ತಿದೆ.!

ಹೌದು ಗೆಳೆಯರೇ ಹಿಂದುಳಿದಂತ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಇತರ ವಿವಿಧ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಬರುವಂತಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಯಶಸ್ವಿ ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತಂದಿದೆ ಮತ್ತು ಈ ಒಂದು ಯೋಜನೆಯ ಮೂಲಕ ವಿದ್ಯಾರ್ಥಿಗಳು ಕನಿಷ್ಠ ಒಂದು ಸಾವಿರ ರೂಪಾಯಿಯಿಂದ ಗರಿಷ್ಠ 35000 ವರೆಗೆ ಸ್ಕಾಲರ್ಶಿಪ್ ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ.
SSP ಸ್ಕಾಲರ್ಶಿಪ್ ಯೋಜನೆಗೆ ಯಾವ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..?
ಗೆಳೆಯರೇ ಪ್ರಸ್ತುತ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಇದೀಗ ವಿವಿಧ ಇಲಾಖೆಯಗಳ ಅಡಿಯಲ್ಲಿ ಬರುವಂತ ವಿದ್ಯಾರ್ಥಿಗಳಿಗೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು ಮತ್ತು ಕೆಲ ಇಲಾಖೆಗಳ ಅಡಿಯಲ್ಲಿ ಬರುವಂತ ವಿದ್ಯಾರ್ಥಿಗಳಿಗೆ ಇದೀಗ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಕ್ತಾಯಗೊಂಡಿದೆ.
ಆದರೆ ಇದೀಗ ಬ್ರಾಹ್ಮಣ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವಂತ ವಿದ್ಯಾರ್ಥಿಗಳು ಹಾಗೂ ಆ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ನಂತರ ಅಂದರೆ ದ್ವಿತೀಯ ಪಿಯುಸಿ ಅಥವಾ ಪದವಿ ಅಥವಾ ಇತರ ಯಾವುದೇ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿದ್ದರೆ ಪ್ರಸ್ತುತ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
- ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಮಾಡುವ ವಿದ್ಯಾರ್ಥಿಯು ನಮ್ಮ ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು
- SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡುವ ವಿದ್ಯಾರ್ಥಿಯ ಪೋಷಕರ ಆದಾಯವು 1.70 ಲಕ್ಷ ರೂಪಾಯಿಗಿಂತ ಆದಾಯ ವಾರ್ಷಿಕವಾಗಿ ಕಡಿಮೆ ಇರಬೇಕಾಗುತ್ತದೆ
- ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಪ್ರಸ್ತುತ ಬ್ರಾಹ್ಮಣ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವಂತ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ
- ಹಾಗೂ ಈ ಇಲಾಖೆ ಅಡಿಯಲ್ಲಿ ಬರುವ ವಿದ್ಯಾರ್ಥಿಗಳು ಪ್ರಸ್ತುತ ಹತ್ತನೇ ತರಗತಿ ನಂತರ ಬರುವಂತ ಯಾವುದೇ ಕೋರ್ಸುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೆ ಅರ್ಜಿ ಸಲ್ಲಿಸಬಹುದು
ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ಪೋಷಕರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
- ಕಾಲೇಜು ಪ್ರವೇಶ ಪ್ರಮಾಣ ಪತ್ರ
- ಕಾಲೇಜು ಅರ್ಜಿ ಶುಲ್ಕ
- ಇಂದಿನ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
- ಇತರೆ ಅಗತ್ಯ ದಾಖಲಾತಿಗಳು
SSP ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು..?
ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುತಿದ್ದೀರಾ ಹಾಗಾದರೆ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಎಸ್ ಎಸ್ ಪಿ ಆನ್ಲೈನ್ ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಾವು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ನೇರವಾಗಿ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ 31 ಆಗಸ್ಟ್ 2025 ರ ಒಳಗಡೆ ಅರ್ಜಿ ಸಲ್ಲಿಸಬೇಕು, ಇದೇ ರೀತಿ ಉಪಯುಕ್ತ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ಗಳಿಗೆ ನೀವು ಸೇರಿಕೊಳ್ಳಬಹುದು
Today Gold Rate: ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು ಗೊತ್ತಾ..?