ಸ್ಕಾಲರ್ಶಿಪ್ ಯೋಜನೆ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 25,000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ಒಂದನೇ ತರಗತಿಯಿಂದ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು ಸ್ನೇಹಿತರೆ, ಕೇಂದ್ರ ಸರ್ಕಾರದ ಹೊಸ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ವಿದ್ಯಾರ್ಥಿಗಳು 25,000 ವರೆಗೆ ಆರ್ಥಿಕ ನೆರವು ಅಥವಾ ಸ್ಕಾಲರ್ಶಿಪ್ ಪಡೆಯಲು ಅವಕಾಶವಿದೆ.
ಆದ್ದರಿಂದ ನಾವು ಈ ಲೇಖನೆಯ ಮೂಲಕ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಸ್ಕಾಲರ್ಶಿಪ್ ಯೋಜನೆ ಯಾವುದು ಹಾಗೂ ಈ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆವರೆಗು ಓದಿ
ಕೇಂದ್ರ ಸರ್ಕಾರದ ಹೊಸ ಸ್ಕಾಲರ್ಶಿಪ್ ಯೋಜನೆ..?
ನಮ್ಮ ಭಾರತ ದೇಶದಲ್ಲಿ ವಾಸ ಮಾಡುವಂತಹ ಬಡ ಹಾಗೂ ಹಿಂದುಳಿದ ವರ್ಗದ ಕುಟುಂಬಗಳಲ್ಲಿ ಇರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಇದೀಗ ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೆ ತಂದಿದೆ. ಈ ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳು 25,000 ವರೆಗೆ ಆರ್ಥಿಕ ನೆರವು ಅಥವಾ ಹಣ ಸಹಾಯ ಪಡೆಯಬಹುದು

ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಇಲಾಖೆಯ ಮೂಲಕ ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದೆ, ಹಾಗಾಗಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ನಮ್ಮ ದೇಶದಲ್ಲಿ ವಾಸ ಮಾಡುವಂಥ ಬಡ ಕುಟುಂಬದಲ್ಲಿ ಇರುವ 1ನೇ ತರಗತಿಯಿಂದ 10ನೇ ತರಗತಿಯವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಈ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..?
ಕೇಂದ್ರ ಸರ್ಕಾರ ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ಸ್ಕಾಲರ್ಶಿಪ್ ಯೋಜನೆ 2025 ಕ್ಕೆ ಸಂಬಂಧಿಸಿದಂತೆ ಇದೀಗ ಅರ್ಜಿ ಪ್ರಾರಂಭವಾಗಿದೆ.
ಹೌದು ಸ್ನೇಹಿತರೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಇದೀಗ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರುವ ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಪದವಿ ಮತ್ತು ವೃತ್ತಿಪರ ಕೋರ್ಸ್ಗಳು ಹಾಗೂ ಇಂಜಿನಿಯರಿಂಗ್ ಮತ್ತು ಡಿಪ್ಲೋಮೋ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳು ಕಡ್ಡಾಯವಾಗಿ ಸುಣ್ಣದ ಕಲ್ಲು, ಡೈನಾಮೈಟ್ ಗಣಿಗಾರರು, ಬೀಡಿ ಕಟ್ಟುವವರ, ಹಾಗೂ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಬರುವಂತ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಕೇಂದ್ರ ಸರ್ಕಾರದ ಈ ಸ್ಕಾಲರ್ಶಿಪ್ ಯೋಜನೆ ಮೂಲಕ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಹತೆಯ ಅನುಗುಣವಾಗಿ ಕನಿಷ್ಠ ₹1,000 ರೂಪಾಯಿಯಿಂದ ₹25,000/- ವರೆಗೆ ಆರ್ಥಿಕ ನೆರವು ಪಡೆಯಲು ಈ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ
ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.80 ಲಕ್ಷ ರೂಪಾಯಿ ಒಳಗಡೆ ಇರಬೇಕಾಗುತ್ತದೆ
- ವಿದ್ಯಾರ್ಥಿಗಳು ಕಡ್ಡಾಯವಾಗಿ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು
- ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ವಿದ್ಯಾರ್ಥಿ ನಮ್ಮ ಭಾರತದಲ್ಲಿ ವಾಸ ಮಾಡುತ್ತಿರಬೇಕು ಹಾಗೂ ನಮ್ಮ ಭಾರತದ ಪೌರತ್ವ ಹೊಂದಿರಬೇಕು
- ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ (scholarship) ವೇತನದ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಅಧಿಕೃತ ವೆಬ್ಸೈಟ್ https://scholarships.gov.in/ ಭೇಟಿ ನೀಡಬಹುದು
ಈ ಸ್ಕಾಲರ್ಶಿಪ್ ಯೋಜನೆಗೆ ಹೇಗೆ ಅರ್ಜಿ ಸಲ್ಲಿಕೆ ಮಾಡಬೇಕು..?
ಕೇಂದ್ರ ಸರ್ಕಾರದ ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನದ ಬಗ್ಗೆ ಮೊದಲು ವಿದ್ಯಾರ್ಥಿಗಳು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ನಂತರ ನಾವು ಕೆಳಗಡೆ ಒಂದು ಲಿಂಕ್ ನೀಡುತ್ತೇವೆ ಅದನ್ನು ಬಳಸಿಕೊಂಡು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಥಿಗಳು ಮೇಲೆ ಕೊಟ್ಟಿರುವ ಲಿಂಕಿನ ಮೂಲಕ ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ನಿಮಗೆ ಇಷ್ಟ ಇರುವಂತ ಅಥವಾ ಹತ್ತಿರವಿರುವಂತ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ
ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ತಕ್ಷಣ ನಮ್ಮ ವಾಟ್ಸಪ್ ಚಾನಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು
labour card scholarship: ಕಾರ್ಮಿಕ ಮಕ್ಕಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ.!